ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಪ್ರಸಿದ್ಧ ಲೇಖಕರ ಕಥೆ, ಕವಿತೆ, ನಾಟಕ, ಕಾದಂಬರಿ ಮತ್ತಿತರ ಸಾಹಿತ್ಯ ಕೃತಿಗಳು, ಜಾನಪದ, ಲೇಖನಗಳನ್ನು ಒಳಗೊಂಡ ಪುಸ್ತಕಗಳನ್ನು ಸಂಗ್ರಹಿಸಬೇಕು. ಸಮಗ್ರ ಶಿಕ್ಷಣ ಕರ್ನಾಟಕದ ನೆರವು ಹಾಗೂ ದಾನಿಗಳಿಂದ ಪುಸ್ತಕಗಳನ್ನು ಪಡೆಯಬೇಕು. ಅಂತಹ ಪುಸ್ತಕ ಓದುವ ಹವ್ಯಾಸವನ್ನು ಮಕ್ಕಳಲ್ಲಿ ರೂಢಿಸಬೇಕು. ಶಿಕ್ಷಕರು ಅಗತ್ಯವಿದ್ದಾಗ ಅರ್ಥ ವಿವರಣೆ ನೀಡಬೇಕು. ಅದಕ್ಕಾಗಿಯೇ ಸರ್ಕಾರ ‘ಓದುವ ಹವ್ಯಾಸ ಜ್ಞಾನದ ವಿಕಾಸ’ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.