ADVERTISEMENT

ಕಂಚ್ಯಾಣಿ ಶರಣಪ್ಪ, ಪದ್ಮನಾಭ ಭಟ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ

ಬಾಲ ಸಾಹಿತ್ಯ ಪುರಸ್ಕಾರಕ್ಕೆ ಕಂಚ್ಯಾಣಿ ಶರಣಪ್ಪ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2018, 11:22 IST
Last Updated 22 ಜೂನ್ 2018, 11:22 IST
ಕಂಚ್ಯಾಣಿ ಶರಣಪ್ಪ ಮತ್ತು ಪದ್ಮನಾಭ ಭಟ್ ಶೇವ್ಕಾರ
ಕಂಚ್ಯಾಣಿ ಶರಣಪ್ಪ ಮತ್ತು ಪದ್ಮನಾಭ ಭಟ್ ಶೇವ್ಕಾರ   

ಬೆಂಗಳೂರು:ಕೇಂದ್ರ ಸಾಹಿತ್ಯ ಅಕಾಡೆಮಿಯ 2018ನೇ ಸಾಲಿನ ಯುವ ಪುರಸ್ಕಾರ ಪ್ರಶಸ್ತಿ ‘ಪ್ರಜಾವಾಣಿ’ ಉಪ ಸಂಪಾದಕ ಪದ್ಮನಾಭ ಭಟ್‌ ಅವರಿಗೆ ದೊರೆತಿದೆ. ವಿಜಯಪುರದ ಕಂಚ್ಯಾಣಿ ಶರಣಪ್ಪ ಶಿವಸಂಗಪ್ಪ ಅವರಿಗೆ 2018ರ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ನೀಡಲಾಗಿದೆ.

ಪದ್ಮನಾಭ ಭಟ್ ಅವರ ‘ಕೇಪಿನ ಡಬ್ಬಿ’ ಕಥಾ ಸಂಕಲನ 2014ರಲ್ಲಿ ‘ಛಂದ ಪ್ರಶಸ್ತಿ’ ಪಡೆಯುವ ಮೂಲಕ ಪ್ರಕಟಗೊಂಡಿತ್ತು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಬಹುಮಾನಗಳನ್ನು ಪಡೆದಿದೆ.

ಕನ್ನಡವೂ ಸೇರಿದಂತೆ ಭಾರತೀಯ ಭಾಷೆಗಳ 23 ಯುವ ಲೇಖಕರ ಕೃತಿಗಳನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದು, ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸುವುದಾಗಿ ಅಕಾಡೆಮಿ ಪ್ರಕಟಣೆ ತಿಳಿಸಿದೆ.₹ 50 ಸಾವಿರ ನಗದು ಹಾಗೂ ತಾಮ್ರ ಫಲಕವನ್ನು ಪ್ರಶಸ್ತಿಯು ಒಳಗೊಂಡಿದೆ.

ADVERTISEMENT

ಕಂಚ್ಯಾಣಿ ಶರಣಪ್ಪಗೆ ಬಾಲ ಸಾಹಿತ್ಯ ಪುರಸ್ಕಾರ:

ವಿಜಯಪುರದ ಕಂಚ್ಯಾಣಿ ಶರಣಪ್ಪ ಶಿವಸಂಗಪ್ಪ ಅವರಿಗೆ 2018ರ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ನೀಡಲಾಗಿದೆ. ಮಕ್ಕಳ ಸಾಹಿತ್ಯಕ್ಕೆ ಅವರು ನೀಡಿರುವ ಒಟ್ಟಾರೆ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ₹ 50 ಸಾವಿರ ನಗದು ಹಾಗೂ ತಾಮ್ರ ಫಲಕವನ್ನು ಒಳಗೊಂಡಿರುವ ಪ್ರಶಸ್ತಿಯನ್ನು ನವೆಂಬರ್‌ 14ರ ‘ಮಕ್ಕಳ ದಿನಾಚರಣೆ’ಯಂದು ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.

ವಿಜಯಪುರದ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದ ಶರಣಪ್ಪನವರು ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಮಕ್ಕಳ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಅವರ ಕೃತಿಗಳಿಗೆ, ಕರ್ನಾಟಕ ಸಾಹಿತ್ಯ ಅಕಾಡಮಿ ಪುಸ್ತಕ ಬಹುಮಾನ ಸೇರಿದಂತೆ ಹಲವು ಬಹುಮಾನಗಳು ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.