ಬೆಂಗಳೂರು: ‘ಜೂನ್ 7ರವರೆಗಿನ ಕೋವಿಡ್ ಸ್ಥಿತಿಗತಿ ಅವಲೋಕಿಸಿ ಲಾಕ್‌ಡೌನ್ ವಿಸ್ತರಿಸುವ ಬಗ್ಗೆ ತೀರ್ಮಾನಿಸಲಾಗುವುದು. ಜನರು ಸಹಕರಿಸಿದರೆ ಲಾಕ್‌ಡೌನ್ ಮುಂದುವರಿಸುವ ಪ್ರಶ್ನೆ ಉದ್ಭವಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕೋವಿಡ್ ಪ್ರಕರಣಗಳು ಹೆಚ್ಚಿರುವ ಮೈಸೂರು, ಹಾಸನ, ಬೆಳಗಾವಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಶನಿವಾರ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ಇದಕ್ಕೆ ಮುನ್ನ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ಕೋವಿಡ್ ದೃಢ ಪ್ರಮಾಣ ಶೇ 10ಕ್ಕಿಂತ ಕಡಿಮೆ ಮಾಡಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾವಿನ ಪ್ರಮಾಣ ರಾಜ್ಯದಲ್ಲಿ ಶೇ 1.7ರಷ್ಟಿದ್ದು, ಅದನ್ನೂ ಕಡಿಮೆ ಮಾಡಬೇಕು’ ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.