ADVERTISEMENT

ಲೋಕಸಭೆ ಚುನಾವಣೆ: ​ಬಿಜೆಪಿ– ಜೆಡಿಎಸ್ ಮೈತ್ರಿ ಬೆನ್ನಲ್ಲೇ ಮೋದಿ ಭೇಟಿಯಾದ ಸುಮಲತಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2023, 9:45 IST
Last Updated 19 ಸೆಪ್ಟೆಂಬರ್ 2023, 9:45 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ –ಸುಮಲತಾ ಅಂಬರೀಶ್</p></div>

ಪ್ರಧಾನಿ ನರೇಂದ್ರ ಮೋದಿ –ಸುಮಲತಾ ಅಂಬರೀಶ್

   

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್​ - ಬಿಜೆಪಿ ಮೈತ್ರಿ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮೋದಿ ಭೇಟಿ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ನಮ್ಮೆಲ್ಲರ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ ನಡೆದ ಜಿ–20 ಶೃಂಗಸಭೆಯ ಯಶಸ್ಸಿಗೆ ಅಭಿನಂದನೆ ತಿಳಿಸಿದ್ದೇನೆ’ ಎಂದು ಹೇಳಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅದಕ್ಕೆ ಸಂಬಂಧಿಸಿದ ಅನೇಕ ಸಲಹೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಸಾಕಷ್ಟು ಒತ್ತಡ ಮತ್ತು ಬಿಡುವಿಲ್ಲದ ಕೆಲಸಗಳ ನಡುವೆಯೂ ಕಡಿಮೆ ಸಮಯದಲ್ಲಿ ನನ್ನ ಭೇಟಿಗೆ ಅವಕಾಶ ನೀಡಿದ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಕಠಿಣ ಪರಿಶ್ರಮ ಮತ್ತು ದೇಶದ ಬಗೆಗಿನ ದೂರದೃಷ್ಟಿ ಯಾವಾಗಲೂ ನಮಗೆ ಸ್ಫೂರ್ತಿ ಹಾಗೂ ಮಾದರಿ. ಧನ್ಯವಾದಗಳು ಸರ್. ಎಂದು ಸಮಲತಾ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.