ADVERTISEMENT

ಆಪರೇಷನ್ ಹಸ್ತ: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂದ ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2023, 4:34 IST
Last Updated 19 ಆಗಸ್ಟ್ 2023, 4:34 IST
ಡಿ.ಕೆ ಶಿವಕುಮಾರ್‌
ಡಿ.ಕೆ ಶಿವಕುಮಾರ್‌   

ಬೆಂಗಳೂರು: ‘ಬಿಜೆಪಿ, ಜೆಡಿಎಸ್‌ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿಯನ್ನು ನಿಮ್ಮಿಂದಲೇ ಕೇಳುತ್ತಿದ್ದೇನೆ. ಆ ಬಗ್ಗೆ ನನಗೇನೂ ಗೊತ್ತಿಲ್ಲ. ಆದರೆ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

‘ಪಕ್ಷದ ಮತ ಗಳಿಕೆ ಪ್ರಮಾಣ ಹೆಚ್ಚಿಸಬೇಕಿದೆ. ಅದಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಬೇರೆ ಪಕ್ಷಗಳ ಕಾರ್ಯಕರ್ತರನ್ನು ಸೇರಿಸಿ ಕೊಳ್ಳುವಂತೆ ಸೂಚಿಸಿದ್ದೇನೆ. ಉಳಿದಂತೆ ಬೇರೆ ಯಾರದ್ದೇ ಪಕ್ಷ ಸೇರ್ಪಡೆ ವಿಚಾರ ನನಗೆ ತಿಳಿದಿಲ್ಲ’ ಎಂದರು.

‘ನಮಗೆ 135 ಶಾಸಕರ ಬಲ ಇದೆ. ಹೀಗಾಗಿ ಬೇರೆಯವರ ಜತೆ ಮಾತನಾಡುವ ಅಗತ್ಯ ಉದ್ಭವಿಸಿಲ್ಲ. ಎಲ್ಲ ಶಾಸಕರೂ ನನಗೆ ಪರಿಚಿತರು. ಬಿಜೆಪಿಯವರು ಯಾರ ಜತೆ ಮಾತನಾಡಿದ್ದಾರೆ ಎಂಬುದರ ಬಗ್ಗೆ ನೀವು ಏಕೆ ಚರ್ಚೆ ಮಾಡುತ್ತಿಲ್ಲ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಅವರು ಭಾವಿಸಿದ್ದಾರೆ’ ಎಂದು ಹೇಳಿದರು.

ADVERTISEMENT

ಓದಿ...

ಬಿರುಗಾಳಿ ತಡೆಗೆ ಬಿಜೆಪಿ ಯತ್ನ: ಶಾಸಕರ ಹಿಡಿದಿಡಲು ಅಖಾಡಕ್ಕೆ ಬಿಎಸ್‌ವೈ, ಬೊಮ್ಮಾಯಿ

ಲೋಕಸಭೆ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು: ’ಮೈತ್ರಿ’ ಮುರಿದವರಿಗೆ ಆಪರೇಷನ್ ಹಸ್ತ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.