ADVERTISEMENT

BJP ಜತೆ JDS ವಿಲೀನವಾಗಿದೆ, ಈಗ ರಾಜ್ಯದಲ್ಲಿರುವುದು ಒಂದೇ ವಿರೋಧ ಪಕ್ಷ: ಸಿಎಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಫೆಬ್ರುವರಿ 2024, 11:07 IST
Last Updated 18 ಫೆಬ್ರುವರಿ 2024, 11:07 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮಂಡ್ಯ: ‘ಬಿಜೆಪಿ ಜತೆ ಜೆಡಿಎಸ್ ವಿಲೀನವಾಗಿದೆ. ಈಗ ರಾಜ್ಯದಲ್ಲಿರುವುದು ಒಂದೇ ವಿರೋಧ ಪಕ್ಷ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈಗ ರಾಜ್ಯದಲ್ಲಿ ಒಂದೇ ವಿರೋಧ ಪಕ್ಷವಿದೆ. ಜೆಡಿಎಸ್‌ ಪಕ್ಷ ಬಿಜೆಪಿಯೊಂದಿಗೆ ವಿಲೀನವಾಗಿದೆ. ಜೆಡಿಎಸ್‌ನವರು ಪ್ರತ್ಯೇಕ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಬಿಜೆಪಿಯವರೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

‘ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28ಕ್ಕೆ 28 ಕ್ಷೇತ್ರಗಳನ್ನು ನಾವೇ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ, ಜನರು ಈ ಬಾರಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ ಎಂದು ನಾನು ನಂಬುತ್ತೇನೆ’ ಎಂದು ಹೇಳಿದ್ದಾರೆ.

ADVERTISEMENT

‘ಸ್ಥಳೀಯವಾಗಿ ಶಾಸಕರು, ಜಿಲ್ಲಾ ಬ್ಲಾಕ್ ಸಮಿತಿ ಅಧ್ಯಕ್ಷರು, ಮುಖಂಡರು ಯಾರನ್ನು ಸೂಚಿಸುತ್ತಾರೋ ಅವರಿಗೆ ಲೋಕಸಭಾ ಚುನಾವಣೆ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

‘ಬಿಜೆಪಿಗರಿಗೆ ಬಜೆಟ್ ಅರ್ಥವಾಗಿಲ್ಲ. ಬಡವರ ಪರವಾಗಿ ನಾವು ಕಾರ್ಯಕ್ರಮಗಳನ್ನು ನೀಡಿರುವುದು ಮತ್ತು ಬಡವರ ವಿರೋಧಿಯಾಗಿರುವ ಅವರಿಗೆ ಅರ್ಥವಾಗುವುದೂ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳು ಮಾತ್ರವಲ್ಲದೆ ಮೂಲಸೌಕರ್ಯ ಅಭಿವೃದ್ಧಿ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೂ ಒತ್ತು ನೀಡುವ ಕೆಲಸ ಮಾಡಿದ್ದೇವೆ’ ಎಂದು ವಿಪಕ್ಷ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.