ಲೋಕಸಭೆ ಚುನಾವಣೆಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮೊದಲ ಹಂತದ ವೋಟಿಂಗ್ ಏಪ್ರಿಲ್ 19ರಂದು ನಡೆದಿದೆ. ಇದೀಗ ಏಪ್ರಿಲ್ 26ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ 13 ರಾಜ್ಯಗಳಲ್ಲಿ ಕರ್ನಾಟಕದ ಜತೆಗೆ ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.