ADVERTISEMENT

ಕೆಲವು ಸಚಿವರ ಕ್ಷೇತ್ರಗಳಲ್ಲಿಯೇ ಹಿನ್ನಡೆ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 5 ಜೂನ್ 2024, 23:35 IST
Last Updated 5 ಜೂನ್ 2024, 23:35 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ನಿರೀಕ್ಷಿಸಿದಷ್ಟು ಫಲಿತಾಂಶ ಬಂದಿಲ್ಲ. ಕೆಲವು ಸಚಿವರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‌‘50 ಸಾವಿರಕ್ಕಿಂತ ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡ ಕ್ಷೇತ್ರಗಳಲ್ಲಿ ಇನ್ನಷ್ಟು ಪರಿಶ್ರಮ ಹಾಕಬೇಕಿತ್ತು’ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ತುಮಕೂರಿನ ಸೋಲಿನ ಬಗ್ಗೆ ಪಕ್ಷದ ನಾಯಕರಿಗೆ ನಾನು ಮತ್ತು ಸಚಿವ ಕೆ.ಎನ್‌. ರಾಜಣ್ಣ ಉತ್ತರ ಕೊಡುತ್ತೇವೆ. ಬಿಜೆಪಿ– ಜೆಡಿಎಸ್‌ ಮೈತ್ರಿ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿಗೆ ಅನುಕೂಲ ಮಾಡಿಕೊಟ್ಟಿದೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.