ADVERTISEMENT

ಹಾಲಿ ಸಂಸದರಿಗೆ ಟಿಕೆಟ್ ಇಲ್ಲ ಎಂಬುದು ಊಹಾಪೋಹ; ಪ್ರಹ್ಲಾದ ಜೋಶಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2024, 15:22 IST
Last Updated 9 ಮಾರ್ಚ್ 2024, 15:22 IST
   

ಶಿವಮೊಗ್ಗ: 'ಲೋಕಸಭಾ ಚುನಾವಣೆಗೆ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಲಿದೆ, ಹಳಬರಲ್ಲಿ ಶೇ 50ರಷ್ಟು ಮಂದಿಗೆ ಮಾತ್ರ ಟಿಕೆಟ್ ಎಂಬ ಮಾನದಂಡ ಬಿಜೆಪಿಯಲ್ಲಿ ಇಲ್ಲ. ಅದೆಲ್ಲ ಕೇವಲ ಊಹಾಪೋಹ, ಗೆಲ್ಲುವ ಅಭ್ಯರ್ಥಿಗೆ, ಪಕ್ಷಕ್ಕೆ ನಿಷ್ಠರಿಗೆ ಟಿಕೆಟ್ ಸಿಗಲಿದೆ' ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಚುನಾವಣೆಗೆ ಟಿಕೆಟ್ ಹಂಚಿಕೆ ಪಕ್ಷದ ಪ್ರಕ್ರಿಯೆ ಅಷ್ಟೇ. ಇದರಲ್ಲಿ ಯಾವುದೇ ಕಸರತ್ತು ಇರೊಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಆದ ಬದಲಾವಣೆ ಜನರು ಗಮನಿಸುತ್ತಿದ್ದಾರೆ. ಸಿದ್ದರಾಮಯ್ಯ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಅಂದವರಿಗೆ ರಕ್ಷಣೆ, ಹಿಂದೂಸ್ತಾನ್ ಜಿಂದಾಬಾದ್ ಅಂದವರಿಗೆ ಶಿಕ್ಷೆ. ಇದು ಸಿದ್ದರಾಮಯ್ಯನವರ ಧೋರಣೆ. ಇದನ್ನೂ ಜನರು ಗಮನಿಸುತ್ತಿದ್ದಾರೆ. ಈ ಎಲ್ಲಾ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆಯಲಿದ್ದೇವೆ ಎಂದು ಹೇಳಿದರು.

ADVERTISEMENT

ಇನ್ನು ಚುನಾವಣೆ ಘೋಷಣೆ ಆಗಿಲ್ಲ. ಆದರೂ ಈಗಾಗಲೇ 195 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಎಲ್ಲರೊಂದಿಗೆ ಮಾತುಕತೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳ ಗಮನಿಸಿ ರಾಷ್ಟ್ರೀಯ ನಾಯಕರು ಉಳಿದ ಅಭ್ಯರ್ಥಿಗಳನ್ನು ಶೀಘ್ರ ತೀರ್ಮಾನ ಮಾಡುತ್ತಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.