ADVERTISEMENT

ಮಸೀದಿಯ ಸ್ಪೀಕರ್‌ಗಳ ತೆರವು ಸೇರಿ ಹಿಂದೂಗಳ ಬೇಡಿಕೆ ಪಟ್ಟಿ ನೀಡಿದ ಯತ್ನಾಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಮಾರ್ಚ್ 2024, 11:27 IST
Last Updated 19 ಮಾರ್ಚ್ 2024, 11:27 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹಿಂದೂಗಳ ಬೇಡಿಕೆ ಪಟ್ಟಿಯೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಯತ್ನಾಳ ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಹಿಂದೂಗಳ ಬೇಡಿಕೆ ಪಟ್ಟಿ ಇಂತಿದೆ...

* ವಕ್ಫ್ ಬೋರ್ಡ್ ಅನ್ನು ನಿಷೇಧಿಸಬೇಕು.

ADVERTISEMENT

* ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಘೋಷಿಸಬೇಕು.

* ಸರ್ವೋಚ್ಚ ನ್ಯಾಯಾಲಯದಲ್ಲಿರುವ ಕೊಲಿಜಿಯಂ ವ್ಯವಸ್ಥೆಯನ್ನು ಕೊನೆಗೊಳಿಸಬೇಕು.

* ಭಾರತೀಯ ಯುವಕರೆಲ್ಲರಿಗೂ ‘ಅಗ್ನಿವೀರ’ ಯೋಜನೆಯನ್ನು ಕಡ್ಡಾಯಗೊಳಿಸಬೇಕು.

* ಮಸೀದಿಯಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು.

* ಸರ್ಕಾರದ ನಿಯಂತ್ರಣದಿಂದ ಹಿಂದೂ ದೇವಾಲಯಗಳನ್ನು ಮುಕ್ತಗೊಳಿಸಬೇಕು.

* ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತದ ಬೋಧನೆಯನ್ನು ಕಡ್ಡಾಯಗೊಳಿಸಬೇಕು.

* ಶಾಲೆಗಳಲ್ಲಿ ಯೋಗ ಕಲಿಸುವುದನ್ನು ಕಡ್ಡಾಯಗೊಳಿಸಬೇಕು.

* ಭಾರತ ವಿರೋಧಿ ಚಟುವಟಿಕೆಗಳಲ್ಲಿ ನಿರತರಾಗಿರುವರ ಸಾಗರೋತ್ತರ ಭಾರತೀಯ ನಾಗರಿಕ (ಒಸಿಐ) ಕಾರ್ಡ್ ಅನ್ನು ನಿಷೇಧಿಸಬೇಕು.

* ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಸಂಪೂರ್ಣಗೊಳಿಸಬೇಕು.

* ಅತ್ಯಾಚಾರ, ದರೋಡೆ, ದೇಶ ವಿರೋಧಿ ಚಟುವಟಿಕೆ, ಕೊಲೆ, ಸುಲಿಗೆ, ಸಾರ್ವಜನಿಕ ಆಸ್ತಿ ಹಾನಿ ಮಾಡಿದವರ ವಿರುದ್ಧ ಶೀಘ್ರ ನ್ಯಾಯ ಪಡೆಯುವುದಕ್ಕೆ ತ್ವರಿತ ಗತಿಯ ನ್ಯಾಯಾಲಯಗಳ ಸ್ಥಾಪನೆ.

* ಭ್ರಷ್ಟಾಚಾರ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ. ಆರೋಪ ಸಾಬೀತಾದರೆ ಸೇವೆಯಿಂದ ವಜಾಗೊಳಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.