ADVERTISEMENT

ಮುಡಾ ಪ್ರಕರಣ: ಎರಡು ಗಂಟೆ ಸಿದ್ದರಾಮಯ್ಯ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 7:26 IST
Last Updated 6 ನವೆಂಬರ್ 2024, 7:26 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿನ ಲೋಕಾಯುಕ್ತ ಎಸ್.ಪಿ. ಕಚೇರಿಯಲ್ಲಿ ಬುಧವಾರ ಎರಡು ಗಂಟೆ ಕಾಲ ವಿಚಾರಣೆಗೆ ಒಳಗಾದರು.

ಬೆಳಿಗ್ಗೆ 10.10ಕ್ಕೆ ಲೋಕಾಯುಕ್ತ ಕಚೇರಿಗೆ ಬಂದ ಅವರು ಮಧ್ಯಾಹ್ನ 12.07ರ ವೇಳೆಗೆ ಅಲ್ಲಿಂದ ಹೊರ ಬಂದರು.

ಲೋಕಾಯುಕ್ತ ಎಸ್.ಪಿ‌. ಟಿ.ಜೆ. ಉದೇಶ್ ನೇತೃತ್ವದ ತಂಡವು ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಮುಡಾದಿಂದ ಪಾರ್ವತಿ ಅವರಿಗೆ ಮಂಜೂರಾದ 14 ಬದಲಿ ನಿವೇಶನಗಳು ಹಾಗೂ ಮೈಸೂರು ತಾಲ್ಲೂಕಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿತು. ಇಡೀ ಪ್ರಕರಣದಲ್ಲಿ ಸಿದ್ದರಾಮಯ್ಯ ಪಾತ್ರದ ಕುರಿತು ಪ್ರಶ್ನೆಗಳನ್ನು ಕೇಳಿತು ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.