ಮೈಸೂರು: ಲೋಕಸಭೆ ಒಳಗೆ ನುಗ್ಗಿದ ಪ್ರಕರಣದಲ್ಲಿ ಗುರುತಿಸಿಕೊಂಡ ಮನೋರಂಜನ್(34) ಅವರ ವಿಜಯನಗರದ 2ನೇ ಹಂತದಲ್ಲಿರುವ ನಿವಾಸಕ್ಕೆ ವಿಜಯನಗರ ಉಪ ವಿಭಾಗದ ಉಪ ಪೊಲೀಸ್ ಆಯುಕ್ತ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಅವರ ತಂದೆ ದೇವರಾಜೇ ಗೌಡ ಅವರಿಂದ ಮಗನ ಬಗ್ಗೆ ಮಾಹಿತಿ ಪಡೆದರು.
ದೇವರಾಜೇ ಗೌಡ ಮಾಧ್ಯಮದೊಂದಿಗೆ ಮಾತನಾಡಿ, 'ಸಮಾಜದ ಬಗ್ಗೆ ಒಲವು ಹೊಂದಿದ್ದ. ನೊಂದವರಿಗೆ ಸಹಾಯ ಮಾಡಬೇಕೆಂಬ ಮನೋಭಾವವಿತ್ತು. ಮನೆಯಲ್ಲಿದ್ದ ಪುಸ್ತಕಗಳನ್ನು ಹೆಚ್ಚು ಓದುತ್ತಿದ್ದ. ಆಗಾಗ ದೆಹಲಿ, ಬೆಂಗಳೂರಿಗೆ ತೆರಳುತ್ತಿದ್ದ. ತಪ್ಪು ಮಾಡಿದ್ದರೆ ಗಲ್ಲುಶಿಕ್ಷೆಯಾಗಲಿ' ಎಂದರು.
ಮನೋರಂಜನ್ ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನ ಮಲ್ಲಾಪುರ ಗ್ರಾಮದವನಾಗಿದ್ದು, ಬೆಂಗಳೂರಿನ ಬಿಐಟಿ ಕಾಲೇಜಿನಿಂದ ಬಿಇ ಪದವಿ ಪಡೆದು ಮನೆಯಲ್ಲಿದ್ದ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.