ADVERTISEMENT

ಸರ್ಕಾರಿ ಗೌರವದೊಂದಿಗೆ ಚಿದಾನಂದಮೂರ್ತಿ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2020, 7:18 IST
Last Updated 12 ಜನವರಿ 2020, 7:18 IST
   
""

ಬೆಂಗಳೂರು:ಹಿರಿಯ ಸಂಶೋಧಕ, ಶನಿವಾರ ನಿಧನರಾಗಿರುವ ಡಾ.ಎಂ.ಚಿದಾನಂದ ಮೂರ್ತಿ(88) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಸುಮನಳ್ಳಿ ವಿದ್ಯುತ್ ಚಿತಾಗಾರದಲ್ಲಿ ಭಾನುವಾರ ನೆರವೇರಿತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು, ಚಿದಾನಂದಮೂರ್ತಿಯವರ ಬಂಧುಗಳು, ಅಪಾರ ಅಭಿಮಾನಿಗಳು ಹಾಜರಿದ್ದರು. ಅಂತ್ಯಕ್ರಿಯೆ ವೇಳೆ‘ಅಮರರಾಗಲಿ ಚಿದಾನಂದಮೂರ್ತಿ’, ‘ಸಿರಿಗನ್ನಡಂ ಗೆಲ್ಗೆ’ ಎಂಬ ಘೋಷಣೆಗಳು ಕೇಳಿಬಂದವು.

ವೀರಶೈವ–ಲಿಂಗಾಯತ ಪದ್ಧತಿಯಲ್ಲಿ ದೇಹವನ್ನು ಸಮಾಧಿ ಮಾಡುವ ಸಂಪ್ರದಾಯ ಇದೆ. ಆದರೆ,ಚಿದಾನಂದಮೂರ್ತಿಯವರು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಮೊದಲೇ ತಿಳಿಸಿದ್ದರು.

ಕನ್ನಡ ಶಕ್ತಿ ಕೇಂದ್ರದ ಮೂಲಕ ಕನ್ನಡ ಭಾಷಾ ಚಳವಳಿಗೆ ಹೊಸ ಆಯಾಮ ಕೊಟ್ಟಿದ್ದ ಚಿದಾನಂದ ಮೂರ್ತಿ ಅವರು ನಾಡಿನ ನೆಲ-ಜಲ, ಭಾಷೆ-ಸಂಸ್ಕೃತಿಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು.

ಚಿದಾನಂದಮೂರ್ತಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇನ್ನಷ್ಟು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.