ಚಿತ್ರದುರ್ಗ: ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಒಳಮೀಸಲಾತಿ ಕುರಿತು ಚರ್ಚಿಸಲು ರಾಜ್ಯದ ಹಲವೆಡೆ ಪ್ರವಾಸ ಮಾಡಿದ್ದ ಸ್ವಾಮೀಜಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸ್ವಾಮೀಜಿ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಗುರುಪೀಠಕ್ಕೆ ಮರಳಲಿದ್ದಾರೆ. ಭಕ್ತರು, ಹಿತೈಷಿಗಳು ಆತಂಕಪಡುವ ಅಗತ್ಯವಿಲ್ಲ’ ಎಂದು ಮಾದಾರ ಚನ್ನಯ್ಯ ಟ್ರಸ್ಟ್ ಕೋಶಾಧ್ಯಕ್ಷರೂ ಆಗಿರುವ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.