ಮಡಿಕೇರಿ: ಕುಶಾಲನಗರ ತಾಲ್ಲೂಕಿನ ಅತ್ತೂರು ನಲ್ಲೂರು ಗ್ರಾಮದಲ್ಲಿ ಶುಕ್ರವಾರ ಕಾಡಾನೆಯೊಂದನ್ನು ಸೆರೆ ಹಿಡಿಯುವ ವೇಳೆ ಅದು 32 ಅಡಿ ಆಳದ ಹಳ್ಳಕ್ಕೆ ಬಿದ್ದು ಮೃತಪಟ್ಟಿದೆ. 20 ವರ್ಷ ವಯಸ್ಸಿನ ಗಂಡಾನೆ ಇದಾಗಿದ್ದು, ಸುತ್ತಮುತ್ತಲ ಪ್ರದೇಶದ ರೈತರ ಮೇಲೆ ದಾಳಿ ನಡೆಸುತ್ತಿತ್ತು. ವ್ಯಕ್ತಿಯೊಬ್ಬರು ಇದರ ದಾಳಿಯಿಂದ ಮೃತಪಟ್ಟಿದ್ದರು.
ಈ ಕುರಿತು ‘ಪ‍್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಆನೆ ಕಾರ್ಯಪಡೆಯ ಡಿಸಿಎಫ್ ಪೂವಯ್ಯ, ‘ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಆನೆಯು ಸ್ಥಳದಿಂದ ಓಡಿತು. ಸ್ವಲ್ಪ ದೂರ ಸಾಗಿದ ನಂತರ ಆಕಸ್ಮಿಕವಾಗಿ 32 ಅಡಿ ಆಳದ ಹಳ್ಳಕ್ಕೆ ಬಿದ್ದು, ತೀವ್ರವಾಗಿ ಗಾಯಗೊಂಡಿತು. ಬಿದ್ದ ರಭಸಕ್ಕೆ ಆನೆಯ ಒಳಾಂಗಗಳು ವಿಫಲಗೊಂಡು, ಸ್ಥಳದಲ್ಲೇ ಮೃತಪಟ್ಟಿತು. ಇದರ ಬಲಗಣ್ಣು ದೃಷ್ಟಿ ಕಳೆದುಕೊಂಡಿದ್ದರಿಂದ 32 ಅಡಿ ಆಳದ ಸಿಮೆಂಟ್ ಗುಂಡಿ ಬಹುಶಃ ಇದಕ್ಕೆ ಕಾಣಿಸಿರಲಿಲ್ಲ ಎನಿಸುತ್ತದೆ. ಸದ್ಯ, ಮೀನುಕೊಲ್ಲಿಯಲ್ಲಿ ಇದರ ಮರಣೋತ್ತರ ಪರೀಕ್ಷೆ ನಡೆಸಿ, ಅಂಗಾಂಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.