ADVERTISEMENT

ಬಿಜೆಪಿ, ಆರೆಸ್ಸೆಸ್‌ನವರ ಆರಾಧ್ಯ ದೈವ ಗೋಡ್ಸೆ– ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 30 ಜನವರಿ 2024, 16:25 IST
Last Updated 30 ಜನವರಿ 2024, 16:25 IST
ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಕೆ.ಎಚ್‌. ಮುನಿಯಪ್ಪ ಪುಷ್ಪನಮನ ಸಲ್ಲಿಸಿದರು. ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಇದ್ದರು
ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಕೆ.ಎಚ್‌. ಮುನಿಯಪ್ಪ ಪುಷ್ಪನಮನ ಸಲ್ಲಿಸಿದರು. ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಇದ್ದರು   

ಬೆಂಗಳೂರು: ‘ಮಹಾತ್ಮ ಗಾಂಧಿ ಶ್ರೇಷ್ಠ ಹಿಂದೂ. ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರ ಆರಾಧ್ಯ ದೈವ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಹಾತ್ಮ ಗಾಂಧಿಯವರ ಪುಣ್ಯ ಸ್ಮರಣೆ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಗಾಂಧೀಜಿಯವರ ತತ್ವಾದರ್ಶಗಳೇ ಕಾಂಗ್ರೆಸ್ ಪಕ್ಷಕ್ಕೆ ದಾರಿದೀಪ’ ಎಂದರು.

‘ಜೈ ಶ್ರೀರಾಮ್’ ಎಂಬುದು ಬಿಜೆಪಿಯವರ ಸ್ವತ್ತಲ್ಲ. ಗಾಂಧೀಜಿಯವರೇ ‘ಹೇ ರಾಮ್’ ಎಂದಿದ್ದರು. ಅವರಂಥ ಹಿಂದೂ ಭಕ್ತನನ್ನೇ ಗುಂಡಿಕ್ಕಿ ಕೊಂದವರೇ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಮ್ಮನ್ನು ಹಿಂದೂ ವಿರೋಧಿಗಳೆಂದು ಬಿಂಬಿಸುತ್ತಾರೆ. ತಾವು ಮಾತ್ರ ಹಿಂದೂಗಳೆಂದು ಪ್ರತಿಪಾದಿಸುತ್ತಿದ್ದಾರೆ’ ಎಂದರು.

ADVERTISEMENT

‘ರಾಮಭಕ್ತರಾಗಿದ್ದ ಗಾಂಧೀಜಿಯವರನ್ನು ಹತ್ಯೆ ಮಾಡಿದ ಗೋಡ್ಸೆಯನ್ನು ಪಾಲಿಸುವವರನ್ನು ಜನರು ನಂಬುವುದಿಲ್ಲ’ ಎಂದ ಮುಖ್ಯಮಂತ್ರಿ, ‘‌ದೇಶಭಕ್ತಿಯ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡುವ ಅಗತ್ಯವಿಲ್ಲ.‌ ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ ಗಾಂಧೀಜಿಯವರಿಗೆ ಸಲ್ಲಿಸುವ ಗೌರವ. ಅವರು ಅಧಿಕಾರದಲ್ಲಿ ಇರಬಾರದು’ ಎಂದರು.

ಗಾಂಧೀಜಿ ನಮಗೆ ಶಾಂತಿಯ ಮಾರ್ಗದರ್ಶನ ಕೊಟ್ಟಿದ್ದಾರೆ. ಬಿಜೆಪಿ- ಜೆಡಿಎಸ್‌ನವರು ಕೂಡಿ ಶಾಂತಿ ಕದಡಲು ಹೊರಟಿದ್ದಾರೆ. ಕಪಟ ನಾಟಕದ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅವರು ಹವಣಿಸುತ್ತಿದ್ದಾರೆ

–ಡಿ.ಕೆ. ಶಿವಕುಮಾರ್‌ ಉಪಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.