ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ಸಂಗ್ರಹಿಸಿದ್ದ ಕಬ್ಬಿಣದ ಅದಿರು ಕಳವು ಮತ್ತು ರಫ್ತು ಮಾಡಿದ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ‘ಮೆಸರ್ಸ್ ಶ್ರೀ ಲಕ್ಷ್ಮಿ ವೆಂಕಟೇಶ್ವರ ಮಿನರಲ್ಸ್’ ಪಾಲುದಾರ ಕೆ.ಮಹೇಶ್ ಕುಮಾರ್ ಅಲಿಯಾಸ್ ಖಾರದಪುಡಿ ಮಹೇಶ್ ತಮ್ಮನ್ನು ಪ್ರಕರಣದಿಂದ ಖುಲಾಸೆಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತ ಅರ್ಜಿಯು ಬುಧವಾರ ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆಗೆ ನಿಗದಿಯಾಗಿತ್ತು. ಅರ್ಜಿಗೆ ಸಂಬಂಧಿಸಿದಂತೆ ಕಚೇರಿಯ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಪ್ರಕರಣದಲ್ಲಿ ಮಹೇಶ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಭಾರತೀಯ ದಂಡ ಸಂಹಿತೆ–1860ರ ವಿವಿಧ ಕಲಂಗಳಡಿ ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಇದೇ 26ರಂದು ತೀರ್ಪು ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.