ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ‘ಎಕ್ಸ್’ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.