ಬೆಂಗಳೂರು: ಮಲ್ಲೇಶ್ವರ ಠಾಣೆಗೆ ಸೇರಿದ್ದ ಹೊಯ್ಸಳ ವಾಹನದ ಇಬ್ಬರು ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ.
ಹೊಯ್ಸಳ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‌ಸ್ಟೆಬಲ್ ಹಾಗೂ ಮಹಿಳಾ ಕಾನ್‌ಸ್ಟೆಬಲ್ ಅವರಲ್ಲಿ ಸೋಂಕು ಇದೆ. ಅವರ ಜತೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ನಾಗರಿಕರಿಗೆ ಸೋಂಕು ಹರಡದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯನ್ನೇ ಸೀಲ್ ಡೌನ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.