ಬೆಂಗಳೂರು: ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಬಿಜೆಪಿಯ ಆನಂದ ಮಾಮನಿ ಅವಿರೋಧವಾಗಿ ಆಯ್ಕೆಯಾದರು. ಉಪಸಭಾಧ್ಯಕ್ಷ ಸ್ಥಾನಕ್ಕೆ ಮಾಮನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅವರ ಆಯ್ಕೆಯನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಪ್ರಕಟಿಸಿದರು.
ಮಾಮನಿ ಅವರ ತಂದೆ ಚಂದ್ರಶೇಖರ ಮಾಮನಿ ಅವರು 1996–1999ರ ಅವಧಿಯಲ್ಲಿ ಉಪಸಭಾಧ್ಯಕ್ಷರಾಗಿದ್ದರು. ಆಗ ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿದ್ದರು. ತಂದೆಯ ನಿಧನದ ನಂತರ 2008ರಲ್ಲಿ ಆನಂದ ಅವರು ಬಿಜೆಪಿಗೆ ಸೇರಿದ್ದರು. ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ಸತತ ಮೂರು ಸಲ (2008, 2013, 2018) ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.