ADVERTISEMENT

ಗರ್ಭಿಣಿಯರ ಅವಹೇಳನ ಆರೋಪ: ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಬಂಧನ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2022, 9:52 IST
Last Updated 8 ಅಕ್ಟೋಬರ್ 2022, 9:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮಂಗಳೂರು: ಗರ್ಭಿಣಿಯ ಚಿತ್ರಕ್ಕೆ ಚಿರತೆಯ ಮುಖ ಅಂಟಿಸಿದ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಸುನಿಲ್ ಬಜಿಲಕೇರಿ ಅವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

ಗರ್ಭಿಣಿಯ ದೇಹಕ್ಕೆ ಚಿರತೆಯ ತಲೆ ಅಂಟಿಸಿದ ಚಿತ್ರವನ್ನು 'ನಮೀಬಿಯಾ ಚೀತಾಗೆ ಸೀಮಂತ ಯಾವಾಗ?' ಎಂಬ ಶೀರ್ಷಿಕೆಯೊಂದಿಗೆ ಫೇಸ್‌ಬುಕ್‌ನಲ್ಲಿ ಸುನಿಲ್ ಬಜಿಲಕೇರಿ ಹಂಚಿಕೊಂಡಿದ್ದರು. ಇದು ಗರ್ಭಿಣಿ ಮತ್ತು ಭಾರತೀಯ ಸಂಸ್ಕೃತಿಗೆ ಮಾಡಿರುವ ಅವಹೇಳನ ಎಂದು ಆರೋಪಿಸಿ ಎಡಪದವು ಗ್ರಾಮದ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

'ಮಹಿಳೆ ಒಬ್ಬರು ನೀಡಿದ ದೂರಿನ ಆಧಾರದಲ್ಲಿ ಸುನಿಲ್ ಬಜಿಲಕೇರಿ ಅವರನ್ನು ಬಂಧಿಸಲಾಗಿತ್ತು ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ' ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.