ADVERTISEMENT

ಮನ್ ಕೀ ಬಾತ್‌ನಲ್ಲಿ ಕಳೆದುಹೋದ ಮಣಿಪುರದ ಬಾತ್: ಮೋದಿ ವಿರುದ್ಧ ನಟ ಕಿಶೋರ್ ಗುಡುಗು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜುಲೈ 2023, 13:00 IST
Last Updated 1 ಜುಲೈ 2023, 13:00 IST
ಪ್ರಧಾನಿ ನರೇಂದ್ರ ಮೋದಿ ಮತ್ತು ನಟ ಕಿಶೋರ್
ಪ್ರಧಾನಿ ನರೇಂದ್ರ ಮೋದಿ ಮತ್ತು ನಟ ಕಿಶೋರ್   

ಬೆಂಗಳೂರು: ಮಣಿಪುರದ ಜನಾಂಗೀಯ ಗಲಭೆಗೆ ಸಂಬಂಧಿಸಿದಂತೆ ಬಹುಭಾಷಾ ನಟ ಕಿಶೋರ್‌ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಮಣಿಪುರದಲ್ಲಿ ಆಗಿರುವ ಜನಾಂಗೀಯ ದಾಳಿಯನ್ನು ಪ್ರಧಾನಿ ಮೋದಿಯವರು ಶಾಂತಿ ಕರೆ ಸಂದೇಶ ರವಾನಿಸಿದ್ದರೆ ಎಲ್ಲವೂ ಬಗೆಹರಿಯುತ್ತಿತ್ತು. ಆದರೆ, ಅದ್ಯಾವುದನ್ನೂ ಅವರು ಮಾಡಿಲ್ಲ. ಇಂಥ ಸಂದರ್ಭದಲ್ಲಿ ಪ್ರಧಾನಿ ಆದವರು ತುಂಬ ಸರಳವಾಗಿ ಏನು ಮಾಡಬಹುದಿತ್ತು ಎಂಬುದನ್ನೂ ಹೇಳಿಕೊಂಡಿದ್ದಾರೆ.

‘ಮನ್ ಕೀ ಬಾತ್‌ನಲ್ಲಿ ಕಳೆದುಹೋದ ಮಣಿಪುರದ ಬಾತ್. ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತೀ ಸರಳ, ಕಾಮನ್ ಸೆನ್ಸ್‌ನ (ಸಾಮಾನ್ಯ ಜ್ಞಾನ) ಕೆಲಸ, ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು’ ಎಂದು ಕಿಶೋರ್ ಪ್ರಶ್ನಿಸಿದ್ದಾರೆ.

ADVERTISEMENT

ನೂರ ನಲವತ್ತು ಕೋಟಿ ವೋಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟ್‌ನ ಮಣಿಪುರದ ಸತ್ತುಹೋದ ನೂರು ವೋಟು, ಮನೆ ಕಳೆದುಕೊಂಡ 50 ಸಾವಿರ ವೋಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002ರಲ್ಲಿ ಗುಜರಾತ್ 2023ರಲ್ಲಿ ಮಣಿಪುರ.. ಜೀವಗಳು ಮುಖ್ಯವಲ್ಲ ವೋಟುಗಳಷ್ಟೇ ಮುಖ್ಯ. ಇತಿಹಾಸಕ್ಕೆ ಮರೆವಿಲ್ಲ ನೆನಪಿರಲಿ ಎಂದು ಕಿಶೋರ್ ಕುಟುಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.