ADVERTISEMENT

‘ಕಲಾವಿದರ ಮಾಸಾಶನ ₹ 2 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಿ: ಮಂಜಮ್ಮ ಜೋಗತಿ

ನಾಟಕ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ: ಮಂಜಮ್ಮ ಜೋಗತಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಮೇ 2022, 19:31 IST
Last Updated 29 ಮೇ 2022, 19:31 IST
ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪುರಸ್ಕೃತ ಕಲಾವಿದರ ಜತೆ (ಎಡದಿಂದ ಕುಳಿತವರು) ಅಕಾಡೆಮಿ ಸದಸ್ಯ ಪ್ರಭುದೇವ ಕಪ್ಪಗಲ್ಲು, ಅಧ್ಯಕ್ಷ ಆರ್‌. ಭೀಮಸೇನ, ಲೆಕ್ಕ ಪರಿಶೋಧಕ ಜಯಪ್ರಕಾಶ್‌ ಗುಪ್ತಾ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ, ಸಚಿವ ಬಿ. ಶ್ರೀರಾಮುಲು, ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ವೈ.ಎಂ. ಸತೀಶ್‌, ಚೇಂಬರ್‌ ಆಫ್‌ ಕಾಮರ್ಸ್‌ ಕಾರ್ಯದರ್ಶಿ ಯಶವಂತ ರಾಜ್‌, ಅಧ್ಯಕ್ಷ ಸಿ. ಶ್ರೀನಿವಾಸರಾವ್‌, ನಾಟಕ ಅಕಾಡೆಮಿ ರಿಜಿಸ್ಟ್ರಾರ್‌ ಮಂಜುನಾಥ ಆರಾಧ್ಯ ಹಾಗೂ ಬುಡಾ ಅಧ್ಯಕ್ಷ ಪಾಲಣ್ಣ ಇದ್ದಾರೆ

ಬಳ್ಳಾರಿ: ‘ಹಿರಿಯ ಕಲಾವಿದರಿಗೆ ನೀಡುತ್ತಿರುವ ಮಾಸಾಶನವನ್ನು ₹ 2 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ರಾಜ್ಯ ಸರ್ಕಾರವನ್ನು
ಒತ್ತಾಯಿಸಿದರು.

ಕರ್ನಾಟಕ ನಾಟಕ ಅಕಾಡೆಮಿ ಇಲ್ಲಿನ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಕಾಡೆಮಿ ಅಧ್ಯಕ್ಷರು, ಸದಸ್ಯರು, ಪ್ರಶಸ್ತಿ ಪುರಸ್ಕೃತ ಕಲಾವಿದರ ಪರಿಚಯವಿರುವ ‘ಕಿರುಹೊತ್ತಿಗೆ’ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ರಂಗದ ಮೇಲೆ ರಾಜ, ರಾಣಿ, ಸೇವಕಿ ವೇಷ ಹಾಕಿ ಮಿಂಚುವ ಕಲಾವಿದರ ಬದುಕಿನಲ್ಲಿ ಕಷ್ಟಕಾರ್ಪಣ್ಯಗಳು ಅಡಗಿರುತ್ತವೆ. ಆದರೂ ಸ್ವಾಭಿಮಾನದಿಂದ ಬದುಕಿದ್ದಾರೆ. ರಂಗಭೂಮಿಯನ್ನೇ ವೃತ್ತಿಯಾಗಿ ಮಾಡಿಕೊಂಡರೆ
ಹೊಟ್ಟೆ ತುಂಬುವುದಿಲ್ಲ. ಯುವ ಕಲಾವಿದರು ರಂಗಭೂಮಿಯನ್ನು ಹವ್ಯಾಸವಾಗಿ ಬೆಳೆಸಿಕೊಂಡು ಬದುಕಿಗೆ ಬೇರೆ ಯಾವುದಾದರೂ ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ’ ಎಂದು ಅವರು ಸಲಹೆ ನೀಡಿದರು.

ADVERTISEMENT

ಸಮಾರಂಭವನ್ನು ಸಚಿವ ಬಿ.ಶ್ರೀರಾಮುಲು ಅವರು ಉದ್ಘಾಟಿಸಿದರು. ನಾಟಕ ಅಕಾಡೆಮಿ ಅಧ್ಯಕ್ಷ ಆರ್‌.ಭೀಮಸೇನ, ಕರ್ನಾಟಕ ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಬೆಳಗಲ್ಲು ವೀರಣ್ಣ, ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ,ಅಕಾಡೆಮಿ ಸದಸ್ಯ ಪ್ರಭುದೇವ ಕಪ್ಪಗಲ್ಲು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.