ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ‘ಅದು ಮಲದ ಗುಂಡಿ ಅಲ್ಲ; ಸ್ವಚ್ಛತಾ ಅಂದೋಲನ ಅಂಗವಾಗಿ ಚೇಂಬರ್ ಒಳಗೆ ಇಳಿಸಿ ಸ್ವಚ್ಛಗೊಳಿಸಲಾಗಿದೆ’ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. ‘ರಾತ್ರಿ ಲೈಟ್ ಆಫ್ ಮಾಡಿ ಬ್ಯಾಗ್ ಸಮೇತ ಹಾಸ್ಟೆಲ್ ಹೊರಗಡೆ ಮಂಡಿಯೂರಿ ಕೂರಿಸಿ ಶಿಕ್ಷೆ ಕೊಡುತ್ತಾರೆ. ಸುಸ್ತಾಗುತ್ತಿದೆ ಎಂದರೂ ಕೇಳಲ್ಲ’ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.