ADVERTISEMENT

ಸಿದ್ದರಾಮಯ್ಯ ಪರ ಶೀಘ್ರ ಮೆರವಣಿಗೆ: ಸಚಿವ ರಾಜಣ್ಣ

​ಪ್ರಜಾವಾಣಿ ವಾರ್ತೆ
Published 29 ಜುಲೈ 2024, 14:37 IST
Last Updated 29 ಜುಲೈ 2024, 14:37 IST
<div class="paragraphs"><p>ಸಚಿವ ಕೆ.ಎನ್‌. ರಾಜಣ್ಣ</p></div>

ಸಚಿವ ಕೆ.ಎನ್‌. ರಾಜಣ್ಣ

   

ಬೆಂಗಳೂರು: ‘ಅಹಿಂದ ಸಮುದಾಯದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನವನ್ನು ಬಿಜೆಪಿ– ಜೆಡಿಎಸ್‌ನವರು ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಪರ ತುಮಕೂರಿನಲ್ಲಿ ಶೀಘ್ರದಲ್ಲಿ ಮೆರವಣಿಗೆ ಮಾಡುತ್ತೇವೆ’ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಪರ ಅಹಿಂದ ಹೋರಾಟ ರಾಜ್ಯದಾದ್ಯಂತ ವಿಸ್ತರಣೆ ಆಗಲೂಬಹುದು’ ಎಂದರು.‌

ADVERTISEMENT

‘ಮುಖ್ಯಮಂತ್ರಿ ವಿರುದ್ಧ ಬಿಜೆಪಿ-ಜೆಡಿಎಸ್‌ನವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಮುಡಾ ಹಗರಣ ತನಿಖೆಯಾಗಿ, ಸತ್ಯ ಹೊರಬರಲಿ. ಅಲ್ಲಿಯವರೆಗೆ ವಿರೋಧ ಪಕ್ಷದವರು ತಾಳ್ಮೆಯಿಂದ ಇರಲಿ’ ಎಂದರು.‌

‘‌ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿದ್ದೆ. ಕೊಟ್ಟರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದೂ ಹೇಳಿದ್ದೆ. ಆ ಮಾತಿಗೆ ನಾನು ಈಗಲೂ ಬದ್ಧ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.