ADVERTISEMENT

ನೇಹಾ ಕೊಲೆ | ರಾಜ್ಯದಲ್ಲಿ ಮಾಸ್ ಮರ್ಡರ್ ಸಾಮಾನ್ಯ: ಬಸವರಾಜ ಬೊಮ್ಮಾಯಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2024, 7:30 IST
Last Updated 19 ಏಪ್ರಿಲ್ 2024, 7:30 IST
ಬಸವರಾಜ ಬೊಮ್ಮಾಯಿ 
ಬಸವರಾಜ ಬೊಮ್ಮಾಯಿ    

ಹುಬ್ಬಳ್ಳಿ: 'ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಅತ್ಯಂತ ಖಂಡನೀಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಎಲ್ಲೆಡೆ ಮಾಸ್ ಮರ್ಡರ್ ಸಾಮಾನ್ಯವಾಗಿದೆ' ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ನೇಹಾ ಕುಟುಂಬದ ಸದಸ್ಯರಿಗೆ ಸಾಂತ್ವನ ನೀಡಿ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. 'ಪೊಲೀಸರು ಸರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯ ಸಹ ಬಿಹಾರ ಆಗಲಿದೆ' ಎಂದರು.

'ಕಾಲೇಜು ಆವರಣದಲ್ಲಿ ಇಂತಹ ಪ್ರಕರಣ ನಡೆಯುತ್ತದೆ ಎಂದು ನಾವ್ಯಾರೂ ಊಹಿಸಿರಲಿಲ್ಲ. ಇದು ಸಮಾಜದಲ್ಲಿ ಆಗುತ್ತಿರುವ ಕ್ಷೋಭೆಯನ್ನು ತೋರಿಸುತ್ತದೆ. ಇಂಥ ಘಟನೆಗಳಿಂದ ಸಮಾಜದಲ್ಲಿ ಸಾಮರಸ್ಯದ ಕೊರತೆಯಾಗುತ್ತದೆ' ಎಂದು ಹೇಳಿದರು.

ADVERTISEMENT

'ರೌಡಿಗಳಿಗೆ, ಗೂಂಡಾಗಳಿಗೆ ಪೊಲೀಸರ ಹೆದರಿಕೆಯೇ ಇಲ್ಲದಂತಾಗಿದ್ದು, ಅವರಿಗೆ ರಾಜ ಮರ್ಯಾದೆ ಸಿಗುತ್ತಿದೆ. ನಾವು ಏನು ಮಾಡಿದರೂ ದಕ್ಕಿಸಿಕೊಳ್ಳಬಹುದು ಎನ್ನುವ ಮನೋಭಾವ ಅವರಲ್ಲಿ ಬೆಳೆದಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.