ಬೆಂಗಳೂರು: ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ನೀಡಲಾಗುವ ಈ ಸಾಲಿನ ‘ಮಾಸ್ತಿ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಪುರಸ್ಕೃತರು: ಲೇಖಕಿ ಹಾಗೂ ‘ತರಂಗ‘ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್.ಪೈ (ಶಿಶು ಸಾಹಿತ್ಯ), ವಿಮರ್ಶಕ ಎಸ್.ಆರ್.ವಿಜಯಶಂಕರ (ವಿಮರ್ಶೆ), ಪುರುಷೋತ್ತಮ ಬಿಳಿಮಲೆ (ಸಂಶೋಧನೆ), ಕವಿ ಸುಬ್ರಾಯ ಚೊಕ್ಕಾಡಿ (ಕಾವ್ಯ), ಕಥೆಗಾರ ಕೇಶವರೆಡ್ಡಿ ಹಂದ್ರಾಳ (ಕಥೆ) ಹಾಗೂ ಸಾಹಿತಿ ಸ.ರಘುನಾಥ (ಸೃಜನಶೀಲ).
‘ಪ್ರಶಸ್ತಿಗಳು ತಲಾ ₹ 25 ಸಾವಿರ ನಗದು, ಮಾಸ್ತಿ ಪ್ರಶಸ್ತಿ ಫಲಕ ಹಾಗೂ ಸನ್ಮಾನ ಒಳಗೊಂಡಿವೆ. ಮಾರ್ಚ್ 27ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ’ ಎಂದುಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್‌ನ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.