ADVERTISEMENT

ಗ್ರಾಮೀಣ ಸೇವೆ ಕಡ್ಡಾಯ ರದ್ದು: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸ್ತು

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2023, 16:27 IST
Last Updated 8 ನವೆಂಬರ್ 2023, 16:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಎಂಬಿಬಿಎಸ್‌ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂಬ ನಿಯಮ ರದ್ದುಪಡಿಸುವ ಉದ್ದೇಶದ ‘ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ (ತಿದ್ದುಪಡಿ) ಸುಗ್ರೀವಾಜ್ಞೆ –2023’ಕ್ಕೆ ರಾಜ್ಯಪಾಲರು ಬುಧವಾರ ಅಂಕಿತ ಹಾಕಿದ್ದಾರೆ.

2012ರ ಕಾಯ್ದೆ ಮತ್ತು 2015ರ ನಿಯಮಗಳ ಅನ್ವಯ ಎಂಬಿಬಿಎಸ್‌ ಮತ್ತು ವೈದ್ಯಕೀಯ ಸ್ನಾತಕೋತ್ತರ ಅಭ್ಯರ್ಥಿಗಳು ಗ್ರಾಮೀಣ ಮತ್ತು ನಗರ ಪ್ರದೇಶದ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿತ್ತು.

ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಿತಿಗೊಳಿಸಿ  ಅಭ್ಯರ್ಥಿಗಳು ಒಂದು ವರ್ಷದ ಗ್ರಾಮೀಣ ಸೇವೆ ಮಾಡಬೇಕಿದೆ. ಕೇಂದ್ರ ಅಥವಾ ರಾಜ್ಯ ಸರ್ಕಾರದ ಹುದ್ದೆಗೆ ಅಭ್ಯರ್ಥಿಗಳು ಆಯ್ಕೆಯಾದರೆ, ಅಂಥವರಿಗೆ ವಿನಾಯಿತಿ ನೀಡಲು ಈ ತಿದ್ದುಪಡಿಯ ಮೂಲಕ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ಸದ್ಯಕ್ಕೆ ವಿಧಾನ ಮಂಡಲ ಅಧಿವೇಶನ ಇಲ್ಲದೇ ಇರುವುದರಿಂದ ಮತ್ತು ಕಾಯ್ದೆಯನ್ನು ತುರ್ತಾಗಿ ಜಾರಿಗೊಳಿಸುವ ಉದ್ದೇಶದಿಂದ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.