ADVERTISEMENT

ಗ್ರೂಪ್‌ ‘ಸಿ’ ಮತ್ತು ‘ಡಿ’ ವೃಂದದ ನೌಕರರ ವೈದ್ಯಕೀಯ ಭತ್ಯೆ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2024, 15:54 IST
Last Updated 8 ಸೆಪ್ಟೆಂಬರ್ 2024, 15:54 IST
<div class="paragraphs"><p> ಭತ್ಯೆ</p></div>

ಭತ್ಯೆ

   

ಬೆಂಗಳೂರು: ರಾಜ್ಯ ಸರ್ಕಾರದ ಗ್ರೂಪ್‌ ‘ಸಿ’ ಮತ್ತು ‘ಡಿ’ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು ₹ 200ರಿಂದ ₹ 500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಪರಿಷ್ಕೃತ ಭತ್ಯೆ ಆಗಸ್ಟ್‌ ತಿಂಗಳಿನಿಂದ ಜಾರಿಗೆ ಬರಲಿದೆ.

ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯು ಜಾರಿಗೆ ಬರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರಿಯಲಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.