ಬೆಳಗಾವಿ: ‘ವಿಧಾನ ಪರಿಷತ್ತಿನಡಿ ಬರುವ ಎಲ್ಲ ಸಮಿತಿಗಳ ಸಭೆಯನ್ನು ಎರಡು ತಿಂಗಳಿಗೊಮ್ಮೆ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸಂಬಂಧಪಟ್ಟ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ.
‘ಸುವರ್ಣ ವಿಧಾನಸೌಧದ ಸದ್ಬಳಕೆಗಾಗಿ ಬೆಂಗಳೂರಿನಲ್ಲಿ ಕೇಂದ್ರೀತ ಹಲವು ಸರ್ಕಾರಿ ಕಚೇರಿಗಳು ಸುವರ್ಣ ವಿಧಾನ ಸೌಧದಿಂದ ಕಾರ್ಯ ನಿರ್ವಹಿಸಬೇಕು ಎಂಬುದು ಉತ್ತರ ಕರ್ನಾಟಕದ ಜನರ ಬೇಡಿಕೆ’ ಎಂದು ಅವರು ತಿಳಿಸಿದ್ದಾರೆ.
‘ಬೆಂಗಳೂರಿನ ಕೆಲ ಸರ್ಕಾರಿ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುವ ಬಗ್ಗೆ ನಾನು ಅಧ್ಯಕ್ಷನಾಗಿದ್ದ ವಿಧಾನ ಪರಿಷತ್ತಿನ ಭರವಸೆಗಳ ಸಮಿತಿಯಿಂದ ಸರ್ಕಾರಕ್ಕೆ ವರದಿ ನೀಡಲಾಗಿತ್ತು. ಅದರ ಪ್ರಗತಿ ಶೂನ್ಯವಾಗಿದೆ. ಅದಕ್ಕೆ ಎರಡು ತಿಂಗಳಿಗೊಮ್ಮೆ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ತಿನಡಿ ಬರುವ ಎಲ್ಲ ಸಮಿತಿಗಳ ಸಭೆ ನಡೆಸಲು ಕ್ರಮ ವಹಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.