ADVERTISEMENT

ನ್ಯಾಯಾಲಯದ ತೀರ್ಮಾನದಂತೆ ಪ್ರಾಧಿಕಾರದ ಮೊದಲ ಸಭೆ: ಸಿದ್ದರಾಮಯ್ಯ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 7:54 IST
Last Updated 3 ಸೆಪ್ಟೆಂಬರ್ 2024, 7:54 IST
   

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಂಬಂಧಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ನ್ಯಾಯಾಲಯದಿಂದ ತಂದಿದ್ದ ತಡೆಯಾಜ್ಞೆಯು ಆಗಸ್ಟ್ 22 ರಂದು ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನದಂತೆಯೇ ಮೊದಲ ಸಭೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಪ್ರಾಧಿಕಾರದ ಸಭೆ ನಡೆಸದಂತೆ ಪ್ರಮೋದಾದೇವಿ ಒಡೆಯರ್ ಹಾಗೂ ಸಂಸದ ಯದುವೀರ್ ಬೆಟ್ಟದ ಆಡಳಿತ ಮಂಡಳಿ ಕಾರ್ಯದರ್ಶಿಗೆ ಪತ್ರ ಬರೆದಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು 'ಹಿಂದೆಯೂ ಆಡಳಿತ ಮಂಡಳಿ ಇತ್ತು. ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರವೇ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಮಂಡಳಿ ಇತ್ತು' ಎಂದರು.

ಯದುವೀರ್ ಒತ್ತಾಯ:

ADVERTISEMENT

'ಪ್ರಕರಣ ಸಂಬಂಧ ನ್ಯಾಯಾಲಯವು ಸೆಪ್ಟೆಂಬರ್ 5ರವರೆಗೆ ತಡೆಯಾಜ್ಞೆ ನೀಡಿದೆ. ಹೀಗಾಗಿ ಮಂಗಳವಾರ ನಿಗದಿಯಾಗಿರುವ ಸಭೆಯು ಕಾನೂನಿನ ಉಲ್ಲಂಘನೆ ಆಗಿದ್ದು, ಸಭೆಯನ್ನು ರದ್ದು ಮಾಡಬೇಕು' ಎಂದು ರಾಜವಂಶಸ್ಥರೂ ಆದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸರ್ಕಾರವನ್ನು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.