ಬೆಳಗಾವಿ: ಮರಾಠಿಯಲ್ಲೇ ನಮಗೆ ದಾಖಲೆಗಳನ್ನು ಕೊಡಬೇಕು. ಸರ್ಕಾರಿ ಕಚೇರಿಗಳಲ್ಲಿ ಮರಾಠಿ ನಾಮಫಲಕ ಅಳವಡಿಸಬೇಕು ಎಂದು ಒತ್ತಾಯಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆ ಮೈದಾನದಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ನಾಡವಿರೋಧಿ ಘೋಷಣೆ ಕೂಗಿದರು.
'ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಝಾಲಾಚ್ ಪಾಹಿಜೇ' ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಪ್ರತಿಭಟನೆ ಮೆರವಣಿಗೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳು ಹಾಗೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಎಂಇಎಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.