ಬೆಂಗಳೂರು: ರಾಜ್ಯದ ಒಳನಾಡು ಭಾಗದಲ್ಲಿ ಮಂಗಳವಾರ ಮತ್ತು ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.
ರಾಜ್ಯದಲ್ಲೇ ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿಯಲ್ಲಿ ಸೋಮವಾರ 38.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಬೀದರ್‌ನಲ್ಲಿ ಭಾನುವಾರ 4 ಸೆಂ.ಮೀ ಮಳೆ ಸುರಿದು ತಂಪೆರೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.