ADVERTISEMENT

ಹಾಲು ಉತ್ಪಾದನೆ: ಪರಿಶಿ‌ಷ್ಟರಿಗೆ ₹1 ಪ್ರೋತ್ಸಾಹ ಧನ ಹೆಚ್ಚಳ

ಶೇ 60ರಷ್ಟು ಪ್ರಗತಿ ಸಾಧನೆಯ ಗುರಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2019, 19:36 IST
Last Updated 16 ಸೆಪ್ಟೆಂಬರ್ 2019, 19:36 IST
.
.   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಹಾಲು ಉತ್ಪಾದಕರಿಗೆ ಹೆಚ್ಚುವರಿಯಾಗಿ ಪ್ರತಿ ಲೀಟರ್‌ ಹಾಲಿಗೆ ತಲಾ ₹1 ಪ್ರೊತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಕಟಿಸಿದರು.

ಸಮಾಜ ಕಲ್ಯಾಣ ಇಲಾಖೆ ‘ರಾಜ್ಯ ಪರಿಷತ್‌’ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಜ್ಯದಲ್ಲಿ ಎಲ್ಲ ವರ್ಗದ ಹಾಲು ಉತ್ಪಾದಕರಿಗೆ ತಲಾ ₹5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಹೆಚ್ಚುವರಿಯಾಗಿ ₹1 ನೀಡುವುದರಿಂದ, ಒಟ್ಟು ₹6 ಪ್ರೋತ್ಸಾಹ ಧನ ನೀಡಿದಂತಾಗುತ್ತದೆ ಎಂದರು.

ಎಲ್ಲಾ ಇಲಾಖೆಗಳಲ್ಲಿರುವ ಎಸ್‌ಸಿ,ಎಸ್‌ಟಿ ಅನುದಾನವನ್ನು ಇದಕ್ಕೆ ಬಳಸಿಕೊಳ್ಳಲಾಗು
ತ್ತಿದೆ. ಈ ಸಾಲಿನಲ್ಲಿ ಒಟ್ಟು ಅನುದಾನದಲ್ಲಿ ಶೇ 18ರಷ್ಟು ಮಾತ್ರ ಬಳಕೆ ಆಗಿದೆ. ಶೇ 50ರಿಂದ ಶೇ 60ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.