ADVERTISEMENT

ಶಾಲಾ ಪ್ರವೇಶಕ್ಕೆ 6 ವರ್ಷ; 2024–25ಕ್ಕೆ ಜಾರಿ: ಬಿ.ಸಿ.ನಾಗೇಶ್‌

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2022, 12:57 IST
Last Updated 13 ಅಕ್ಟೋಬರ್ 2022, 12:57 IST
ಬಿ.ಸಿ.ನಾಗೇಶ್‌
ಬಿ.ಸಿ.ನಾಗೇಶ್‌   

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗವಿಗೆ 6 ವರ್ಷಗಳು ಪೂರ್ಣಗೊಂಡಿರಬೇಕು. ಈ ನಿಯಮವನ್ನು 2025–26ರಿಂದ ಜಾರಿಗೊಳಿಸುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಶಾಲಾ ಶಿಕ್ಷಣಕ್ಕೆ ಮಗು ಪ್ರವೇಶ ಪಡೆಯಲು 6 ವರ್ಷಗಳು ಪೂರ್ಣಗೊಂಡಿರುವುದು ಕಡ್ಡಾಯ. ಶಿಕ್ಷಣ ತಜ್ಞರ ಸಲಹೆಯೂ ಅದೇ ಆಗಿದೆ. 23 ರಾಜ್ಯಗಳು ಈಗಾಗಲೇ ನಿಯಮ ಅಳವಡಿಸಿಕೊಂಡಿವೆ. ರಾಜ್ಯದಲ್ಲೂ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಈ ನಿಯಮ ಅಳವಡಿಸಿಕೊಳ್ಳಲಾಗುವುದು. ಆ ಮಕ್ಕಳು ಎರಡು ವರ್ಷಗಳ ನಂತರ (2025–26) ಒಂದನೇ ತರಗತಿಗೆ ಪ್ರವೇಶ ಪಡೆಯಲು ಅನುಕೂಲವಾಗುತ್ತದೆ ಎಂದರು.

ಕೋವಿಡ್‌ ನಂತರದ ದಿನಗಳಲ್ಲಿ ಬಹಳಷ್ಟು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಅವರ ಕಲಿಕಾಮಟ್ಟ ಮೌಲ್ಯಮಾಪನ ಮಾಡಲು, ಕಲಿಕೆಯ ಸಾಮರ್ಥ್ಯ ವೃದ್ಧಿಸಲು 5 ಮತ್ತು 8ನೇ ತರಗತಿಲ್ಲಿ ಸಾಮಾನ್ಯ ಪರೀಕ್ಷೆ ನಡೆಸುವ ಚಿಂತನೆ ಇದೆ. ಈ ಕುರಿತು ಸಭೆ ಕರೆಯಲಾಗಿದೆ. ಚರ್ಚೆಯ ನಂತರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಿವರ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.