ಮಡಿಕೇರಿ: ‘ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳೂ ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಅಲ್ಲಿನ ಬೋಧನೆ ಕುರಿತು ವರದಿ ಕೇಳಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
‘ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆಪರಿಶೀಲಿಸಲಾಗುತ್ತಿದೆ’ ಎಂದು ಗುರುವಾರ ಸುದ್ದಿಗಾರರಿಗೆ ಹೇಳಿದರು.
‘ಬಹಳಷ್ಟು ಅರೇಬಿಕ್ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವವರ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಇದಾಗಬಾರದು’ ಎಂದು ಪ್ರತಿಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.