ಹುಬ್ಬಳ್ಳಿ: ಪಂಚಮಸಾಲಿ ಮೀಸಲಾತಿ ಹೋರಾಟದ ಭಾಗವಾಗಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ದುಂಡು ಮೇಜಿನ ಸಭೆಯಲ್ಲಿ ನಾನು ಭಾಗವಹಿಸುವುದಿಲ್ಲ. ಸ್ವಾಮೀಜಿ ಹೋರಾಟದ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದು, ಮುಂದೆ ಸಕಾರಾತ್ಮಕ ಹೆಜ್ಜೆಯನ್ನು ಇಡಲಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಭರವಸೆ ನೀಡಿದರು.
ಪಂಚಮಸಾಲಿ ಮೀಸಲಾತಿಗಾಗಿ ಹುಬ್ಬಳ್ಳಿಯಲ್ಲಿ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಗುರುವಾರ ಆಯೋಜಿಸಿರುವ ಚಳವಳಿಗಾರರ ದುಂಡು ಮೇಜಿನ ಸಭೆಗೆ ಮುನ್ನ, ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನಾನು ಮಾತಾಡುವುದಿಲ್ಲ. ಕೆಲಸ ಮಾಡಿ ತೋರಿಸುವೆ. ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ, ಆಗಸ್ಟ್ 15ರ ಬಳಿಕ ಮುಖ್ಯಮಂತ್ರಿ ಮತ್ತು ಸ್ವಾಮೀಜಿ ಭೇಟಿಗೆ ವ್ಯವಸ್ಥೆ ಮಾಡುವೆ. ಸರ್ಕಾರದಿಂದ ಸಮಾಜದ ಬೇಡಿಕೆ ಈಡೇರಲಿದ್ದು, ಸಮುದಾಯದವರು ತಾಳ್ಮೆಯಿಂದ ಕಾಯಬೇಕು ಎಂದು ಮನವಿ ಮಾಡಿದರು.
ಸಭೆ ಆರಂಭಕ್ಕೂ ಮುಂಚೆಯೇ ಅವರು ಸ್ವ ಕ್ಷೇತ್ರ ನರಗುಂದಕ್ಕೆ ಪ್ರಯಾಣ ಬೆಳೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.