ಬೆಂಗಳೂರು: ಕಾನೂನು ಮೀರಿ ಮದ್ಯದಂಗಡಿಗಳಿಗೆ ಪರವಾನಗಿ ನೀಡಿದರೆ, ಪರವಾನಗಿ ರದ್ದುಪಡಿಸುವುದರ ಜತೆಗೆ ಅದಕ್ಕೆ ಸಹಕರಿಸಿದ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ನೀಡುವ ಪ್ರಸ್ತಾವ ಇಲ್ಲ. ಹಳೇ ನಿಯಮದಂತೆ ಸಿಎಲ್–07 ಪರವಾನಗಿ ನೀಡಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಒಂದು ಲೈಸೆನ್ಸ್ ಪಡೆದು ಮೂರರಿಂದ ನಾಲ್ಕು ಬಾರ್‌ಗಳನ್ನು ನಡೆಸುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಯಾರಾದರೂ ಮಾಹಿತಿ ನೀಡಿದರೆ, ಎಂಥದ್ದೇ ಪ್ರಭಾವಿಗಳಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇನೆ. ನನಗೆ ಕಾಲಾವಕಾಶ ಕೊಟ್ಟು ನೋಡಿ ಇಲಾಖೆಯನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸುತ್ತೇನೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
‘ಶಾಲಾ–ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಇದಕ್ಕಾಗಿ ವಿಶೇಷ ತನಿಖಾ ದಳವನ್ನು ರಚಿಸುವ ಸಂಬಂಧ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ’ ಎಂದೂ ಗೋಪಾಲಯ್ಯ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.