ಬೆಂಗಳೂರು: ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಗೆ ಹೆಚ್ಚುವರಿ ಹಣದ ಅಗತ್ಯವಿದೆ ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಹೇಳಿದರು.
ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಖಂಡ್ರೆ ಅವರು ಹಣಕಾಸು ಇಲಾಖೆಯ ವೆಚ್ಚ ವಿಭಾಗದ ಕಾರ್ಯದರ್ಶಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜತೆ ಚರ್ಚೆ ನಡೆಸಿದರು.
ಅರಣ್ಯೀಕರಣ, ವನ್ಯಜೀವಿ ಆವಾಸಸ್ಥಾನ ನಿರ್ವಹಣೆ, ಮಾನವ- ವನ್ಯಜೀವಿ ಸಂಘರ್ಷ ನಿಯಂತ್ರಣ, ಅರಣ್ಯ ಗಡಿ ಗುರುತಿಸುವಿಕೆ ಮತ್ತು ರಕ್ಷಣೆ ಕಾರ್ಯಗಳಿಗೆ ಸಂಬಂಧಿಸಿದಂತೆ ಹಲವು ಪ್ರಸ್ತಾವನೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ. ಇವುಗಳಿಗೆ ಅಗತ್ಯವಿರುವ ಹೆಚ್ಚುವರಿ ಹಣವನ್ನು ಒದಗಿಸುವ ಅಗತ್ಯವಿದೆ ಎಂದು ಸಚಿವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.