ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಚರ್ಚಿಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋಧಿಯನ್ನು ಒಂದು ವರ್ಷದಿಂದ ಬಿಡುಗಡೆಯಾಗದ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು.
ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲ್ಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ವಿನಂತಿಸಿದರು. ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.