ADVERTISEMENT

2,022 ಹುದ್ದೆ ತುಂಬುವ ಪ್ರಕ್ರಿಯೆ ಆರಂಭ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 16:32 IST
Last Updated 3 ಮಾರ್ಚ್ 2024, 16:32 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಬೆಂಗಳೂರು: ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯಲ್ಲಿ ಖಾಲಿ ಇರುವ 2,022 ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರದಲ್ಲಿಯೇ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗುವುದು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಎಂಜಿನಿಯರ್‌, 288 ಸಹಾಯಕ ಎಂಜನಿಯರ್ ಮತ್ತು 24 ಸಹಾಯಕ ಕಾರ್ಯಪಾಲಕ ಎಂಜನಿಯರ್ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಜ. 31ರಂದು ಅಂತಿಮ ಪಟ್ಟಿಯ ಅಧಿಸೂಚನೆ ಹೊರಡಿಸಿದೆ. ಈ ಪೈಕಿ, 24 ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳ ನೇಮಕಾತಿ ಆದೇಶವನ್ನು ಕೆಪಿಎಸ್‌ಸಿ ತಡೆ ಹಿಡಿದಿದ್ದು, ಉಳಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ’ ಎಂದರು.

‘ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಾದ ವಿವಿಧ 91 ಹುದ್ದೆಗಳನ್ನು ನೇರ ನೇಮಕಾತಿ ಕೋಟಾದಡಿ ಆನ್‌ಲೈನ್‌ ಮೂಲಕ ಭರ್ತಿ ಮಾಡಲು ಕೆಪಿಎಸ್‌ಸಿಗೆ ತಿಳಿಸಲಾಗಿದೆ. ಈ ಹುದ್ದೆಗಳಲ್ಲಿ 20 ಕಿರಿಯ ಎಂಜನಿಯರ್, 18 ಪ್ರಥಮ ದರ್ಜೆ ಸಹಾಯಕರು. 3 ಪ್ರಥಮ ದರ್ಜೆ ಲೆಕ್ಕ ಸಹಾಯಕರು, 42 ದ್ವಿತೀಯ ದರ್ಜೆ ಸಹಾಯಕರು ಹಾಗೂ 8 ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹುದ್ದೆಗಳು’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

‘ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಇಲಾಖೆಯಲ್ಲಿ ಐವರು ಸಹಾಯಕ ಕಾರ್ಯಪಾಲಕ ಎಂಜನಿಯರ್‌ಗಳ ನೇರ ನೇಮಕಾತಿ ಮಾಡಲು ಕಳೆದ 24ರಂದು ಕೆಪಿಎಸ್‌ಸಿಗೆ ಸೂಚಿಸಲಾಗಿದೆ. ಇದೇ ಇಲಾಖೆಯಲ್ಲಿನ 2 ಪ್ರಥಮ ದರ್ಜೆ ಲೆಕ್ಕ ಸಹಾಯಕ, 49 ದ್ವಿತೀಯ ದರ್ಜೆ ಸಹಾಯಕ ಮತ್ತು 6 ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ನಡೆಯುತ್ತಿದೆ’ ಎಂದೂ ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.