ADVERTISEMENT

ಸಿಎಂ ಸಿದ್ದರಾಮಯ್ಯಗೆ ಬೆಂಬಲ: ನಮ್ಮಲ್ಲಿ ಪ್ಲಾನ್ ಎ ಅಷ್ಟೆ –ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 14:53 IST
Last Updated 3 ಅಕ್ಟೋಬರ್ 2024, 14:53 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ನವದೆಹಲಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಬಲವಾಗಿ ನಿಲ್ಲಬೇಕು ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚೆಯಾಗಿದೆ. ನಮ್ಮಲ್ಲಿರುವುದು ಪ್ಲಾನ್‌ ಎ ಅಷ್ಟೆ, ಪ್ಲಾನ್‌ ಬಿ ಇಲ್ಲವೇ ಇಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲು ರಾಷ್ಟ್ರ ರಾಜಧಾನಿಗೆ ಬಂದಿರುವ ಅವರು ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದರು. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ.

‘ಶಾಸಕ ಜಿ.ಟಿ.ದೇವೇಗೌಡರು ಉತ್ತಮ ಮಾತುಗಳನ್ನು ಹೇಳಿದ್ದಾರೆ. ಅವರ ಮಾತನ್ನು ಅವರ ಪಕ್ಷದ ಎಲ್ಲರೂ ಪಾಲನೆ ಮಾಡಬೇಕು. ಬೇರೆ ಬೇರೆ ರಾಜ್ಯಗಳ ಸಚಿವರ ಮೇಲೆ ಪ್ರಕರಣಗಳು ದಾಖಲಾಗಿವೆ. ಅವರೆಲ್ಲ ರಾಜೀನಾಮೆ ಕೊಡುತ್ತಾರಾ’ ಎಂದು ಅವರು ಪ್ರಶ್ನಿಸಿದರು.

ADVERTISEMENT

‘ಆರ್‌. ಅಶೋಕ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನಂತರದ ವಿಷಯವನ್ನು ನಾವು ಹೇಳುತ್ತೇವೆ. ಅವರು ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.