ಬೆಳಗಾವಿ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ಅವರಿಗೆ ಮಂಗಳವಾರ ಹೃದಯಾಘಾತವಾಗಿದೆ.
ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ರಾತ್ರಿ 10ರ ಸುಮಾರಿಗೆ ಸಚಿವರಿಗೆ ಹೃದಯಾಘಾತವಾಗಿದ್ದು, ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.