ADVERTISEMENT

ಜಿ.ಟಿ. ದೇವೇಗೌಡ ಸತ್ಯ ಹೇಳಿದ್ದಾರೆ: ಸಚಿವ ಜಮೀರ್ ಅಹಮದ್

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 15:46 IST
Last Updated 3 ಅಕ್ಟೋಬರ್ 2024, 15:46 IST
ವಸತಿ ಸಚಿವ ಜಮೀರ್ ಅಹಮದ್ ಖಾನ್ –ಪ್ರಜಾವಾಣಿ ಚಿತ್ರ
ವಸತಿ ಸಚಿವ ಜಮೀರ್ ಅಹಮದ್ ಖಾನ್ –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ, ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದು ಮೊದಲಿನಿಂದಲೂ ನಾವು (ಕಾಂಗ್ರೆಸ್) ಹೇಳಿಕೊಂಡು ಬಂದಿದ್ದೇವೆ. ಅದನ್ನೇ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡರು ಹೇಳಿದ್ದಾರೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ನಾವು ಹೇಳುತ್ತಲೇ ಬಂದಿರುವುದನ್ನು ಇದೀಗ ಜಿ.ಟಿ. ದೇವೇಗೌಡ, ಎಸ್.ಟಿ. ಸೋಮಶೇಖರ್ (ಬಿಜೆಪಿ ಶಾಸಕ) ಹೇಳುತ್ತಿದ್ದಾರೆ. ಅವರು ಸತ್ಯ ಹೇಳಿದ್ದಾರೆ’ ಎಂದರು.

‘ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ. ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಇರಲಿದ್ದಾರೆ’ ಎಂದೂ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.