ADVERTISEMENT

ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಒಲಿದ ಸಚಿವ ಸ್ಥಾನ 

ಸಂಕ್ಷಿಪ್ತ ಪರಿಚಯ 

​ಪ್ರಜಾವಾಣಿ ವಾರ್ತೆ
Published 30 ಮೇ 2019, 8:44 IST
Last Updated 30 ಮೇ 2019, 8:44 IST
ಸುರೇಶ ಅಂಗಡಿ
ಸುರೇಶ ಅಂಗಡಿ   

ಬೆಳಗಾವಿ: ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾದ ಬೆಳಗಾವಿ ಲೋಕಸಭಾ ಕ್ಷೇತ್ರದ ಸುರೇಶ ಅಂಗಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

ಬೆಳಗಾವಿ ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದ ಚನ್ನಬಸಪ್ಪ ಹಾಗೂ ಸೋಮವ್ವ ದಂಪತಿಯ ಮಗನಾಗಿ1955ರ ಜೂನ್‌1ರಂದು ಜನ್ಮತಾಳಿದರು.ಬೆಳಗಾವಿಯ ಎಸ್‌.ಎಸ್‌.ಎಸ್‌.ಸಮಿತಿ ಕಾಲೇಜಿನಲ್ಲಿ ಬಿ.ಕಾಂ ಪದವಿ,ರಾಜಾ ಲಖಮಗೌಡ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಸಿಮೆಂಟ್‌ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.

ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಕಟ್ಟುವಲ್ಲಿ ಸಾಕಷ್ಟು ಶ್ರಮಿಸಿದರು. 1996ರಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನೇಮಕವಾದರು.ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಿದರು. 2001ರಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಹುದ್ದೆಗೇರಿದರು. 2004ರಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ,ಆಯ್ಕೆಯಾದರು. 2009, 2014ಹಾಗೂ2019ರಲ್ಲಿ ನಿರಂತರ ಜಯ ದಾಖಲಿಸಿದರು.
ಪತ್ನಿ ಮಂಗಳಾ ಹಾಗೂ ಸ್ಪೂರ್ತಿ ಹಾಗೂ ಶ್ರದ್ಧಾ ಇಬ್ಬರು ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.