ADVERTISEMENT

ಹುಡುಗಿ ಜೊತೆ ಅಸಭ್ಯ ವರ್ತನೆ: ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2023, 15:33 IST
Last Updated 10 ಫೆಬ್ರುವರಿ 2023, 15:33 IST
   

ವಿಜಯಪುರ: ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಹುಡುಗಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಅವಳಿ ಸಹೋದರರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ತಾಲ್ಲೂಕಿನ ಹೆಗಡಿಹಾಳ ಲಂಬಾಣಿ ತಾಂಡಾದ ಬಸವ ನಗರದಲ್ಲಿ ಶುಕ್ರವಾರ ನಡೆದಿದೆ.

ಹೆಗಡಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಸಿಂಗ್ ಹಾಗೂ ತಾಂಡಾದ ಪಂಚರ ಸಮ್ಮುಖದಲ್ಲಿ ತೇಜು ಚವ್ಹಾಣ, ರಾಜು ಚವ್ಹಾಣ ಎಂಬುವರ ತಲೆ ಬೋಳಿಸಿ, ಸುಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಲಾಗಿದೆ.

ಮಹಾರಾಷ್ಟ್ರದಲ್ಲಿ ಕೆಲಸಕ್ಕೆ ತಾಂಡಾದಿಂದ ಒಟ್ಟಿಗೆ ಹೋಗಿದ್ದ ಸಂದರ್ಭದಲ್ಲಿ ಒಂದು ತಿಂಗಳ ಹಿಂದೆ ತಮ್ಮದೇ ತಾಂಡಾದ ಹುಡುಗಿಯೊಂದಿಗೆ ಈ ಸಹೋದರರು ಅಸಭ್ಯವಾಗಿ ವರ್ತಿಸಿ, ಗಲಾಟೆ ಮಾಡಿದ್ದರು. ಇದೀಗ ತಾಂಡಾಕ್ಕೆ ಮರಳಿ ಬಂದಾಗ ಪಂಚರು ವಿಚಾರಣೆ ನಡೆಸಿ, ಗ್ರಾಮಸ್ಥರ ಸಮ್ಮುಖದಲ್ಲಿ ಶಿಕ್ಷೆ ವಿಧಿಸಿದ್ದಾರೆ.

ADVERTISEMENT

‘ವಿಷಯ ತಿಳಿದ ತಕ್ಷಣ ತಾಂಡಾಕ್ಕೆ ಭೇಟಿ ನೀಡಿ ಪರಿಶೀಲಿಸಿ, ಗ್ರಾಮದ ಪಂಚರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ವಿಜಯಪುರ ಗ್ರಾಮೀಣ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.