ADVERTISEMENT

ಶಾಸಕರ ನಿಧಿ ಬಳಕೆ: ಮಾರ್ಗಸೂಚಿ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 14:00 IST
Last Updated 30 ಜುಲೈ 2023, 14:00 IST
ವಿಧಾನಸೌಧ
ವಿಧಾನಸೌಧ   

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಸರ್ಕಾರಿ ಕಾಲೇಜು, ಎಂಜಿನಿಯರಿಂಗ್‌ ಕಾಲೇಜುಗಳಿಗೆ ಮೂಲಸೌಲಭ್ಯ ಕಲ್ಪಿಸಲು ಅಗತ್ಯಕ್ಕೆ ಅನುಗುಣವಾಗಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು ಬಳಸಲು ಅವಕಾಶ ಕಲ್ಪಿಸಲಾಗಿದೆ.

ಈ ಸಂಬಂಧ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ.

ಸರ್ಕಾರಿ ಕಾಲೇಜು, ಕೈಗಾರಿಕಾ ತರಬೇತಿ ಸಂಸ್ಥೆ, ಪಾಲಿಟೆಕ್ನಿಕ್‌ಗಳು, ಎಂಜಿನಿಯರಿಂಗ್‌ ಕಾಲೇಜುಗಳು, ಸರ್ಕಾರಿ ಔದ್ಯೋಗಿಕ ಸಂಸ್ಥೆಗಳಿಗೆ ತರಗತಿ ಕೊಠಡಿಗಳು, ಆವರಣ ಗೋಡೆ, ಗ್ರಂಥಾಲಯ, ಪ್ರಯೋಗಾಲಯ, ಶೌಚಾಲಯಗಳ ‌ನಿರ್ಮಾಣ, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕಾಲೇಜುಗಳಿಗೆ ಉಪಕರಣಗಳನ್ನು ಒದಗಿಸುವುದು, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವುದು, ರಸ್ತೆ, ಆಟದ ಮೈದಾನ, ಉಪಾಹಾರ ಮಂದಿರಗಳಂಥ ಮೂಲಸೌಕರ್ಯ ಒದಗಿಸಲು ಶಾಸಕರ ಅನುದಾನವನ್ನು ಬಳಸಬಹುದು.

ADVERTISEMENT

ಅಲ್ಲದೆ, ಸರ್ಕಾರಿ ವಿಶ್ವವಿದ್ಯಾಲಯಗಳ ಎಲ್ಲ ವಿಭಾಗಗಳಿಗೂ ಕಂಪ್ಯೂಟರ್‌ ಒದಗಿಸಲು ಕೂಡಾ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.