ಬೆಂಗಳೂರು: ಹೊಸಪೇಟೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಈ ಕುರಿತ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಮುಕ್ತಾಯಗೊಳಿಸಿತು.
ಈ ಮುನ್ನ ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದಲ್ಲಿ ಗಣೇಶ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಕಾಂಗ್ರೆಸ್ ಪಕ್ಷದ ಶಾಸಕರುಗಳಾದ ಗಣೇಶ್ ಮತ್ತು ಆನಂದ ಸಿಂಗ್ ಇತ್ತೀಚೆಗೆ ಈಗಲ್‌ಟನ್ ರೆಸಾರ್ಟ್‌ನಲ್ಲಿ ಪರಸ್ಪರ ಕಾದಾಡಿಕೊಂಡಿದ್ದರು. ಈ ಸಂದರ್ಭದಲ್ಲಿ, ‘ಗಣೇಶ್ ಅವರು, ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿದರು’ ಎಂಬ ಆರೋಪ ಎದುರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.