ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಬೆಂಬಲಿಗರು ನಗರದ ರಾಜಭವನ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ರಾಜಭವನದಲ್ಲಿ ನಡೆಯುತ್ತಿದೆ.
ಎಂ.ಕೃಷ್ಣಪ್ಪ ಹಾಗೂ ಅವರ ಪುತ್ರರಾದ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ಅವರ ಭಾವಚಿತ್ರ ಹಿಡಿದು ಬೆಂಬಲಿಗರು ಘೋಷಣೆ ಕೂಗುತ್ತಿದ್ದಾರೆ. ರಾಜಭವನ ಎದುರು ಬ್ಯಾರಿಕೇಡ್ ಬಳಿ ನಿಂತಿರುವ ಬೆಂಬಲಿಗರನ್ನು ಪೊಲೀಸರು ಸ್ಥಳದಿಂದ ಚದುರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.