ADVERTISEMENT

ಸುಮಲತಾ, ರವಿಕುಮಾರ್‌, ಎಂ.ನಾಗರಾಜ್‌ ಪರಿಷತ್ತಿಗೆ?

​ಪ್ರಜಾವಾಣಿ ವಾರ್ತೆ
Published 31 ಮೇ 2024, 19:30 IST
Last Updated 31 ಮೇ 2024, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಜೂನ್‌ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಪಾಲಿನ ಮೂರು ಸ್ಥಾನಗಳಿಗೆ ವಿಧಾನಪರಿಷತ್‌ನ ಹಾಲಿ ಸದಸ್ಯ ಎನ್‌.ರವಿಕುಮಾರ್‌, ಸಂಸದೆ ಸುಮಲತಾ ಮತ್ತು  ಪ್ರೊ.ಎಂ.ನಾಗರಾಜ್ ಅವರನ್ನು ಸಂಭಾವ್ಯ ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸುವ ಸಾಧ್ಯತೆಗಳಿವೆ.

ಮೂರು ಸ್ಥಾನಗಳಿಗೆ ಬಿಜೆಪಿಯಲ್ಲಿ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು 40 ಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದರು. ನಳಿನ್‌ಕುಮಾರ್ ಕಟೀಲ್‌, ಪ್ರತಾಪ ಸಿಂಹ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಹಲವರ ಹೆಸರುಗಳು ಮುಂಚೂಣಿಗೆ ಬಂದಿದ್ದವು. ಸುಮಾರು 15 ಹೆಸರುಗಳನ್ನು ಅಂತಿಮಗೊಳಿಸಿ ವರಿಷ್ಠರಿಗೆ ಕಳುಹಿಸಲಾಗಿತ್ತು.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಸುಮಲತಾ ಅವರಿಗೆ ಪರಿಷತ್‌ ಸ್ಥಾನ ನೀಡುವ ಸಾಧ್ಯತೆ ಇದೆ. ಹುಬ್ಬಳ್ಳಿ–ಧಾರವಾಡ ಮೂಲದ ಎಂ. ನಾಗರಾಜ್‌ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಮತ್ತು ಬಿಜೆಪಿಯಲ್ಲೂ ಕೆಲಸ ಮಾಡಿದ್ದಾರೆ. ‍ಪರಿಷತ್ತಿನಲ್ಲಿ ವಿರೋಧ ಮುಖ್ಯಸಚೇತಕರಾಗಿರುವ ಎನ್‌.ರವಿಕುಮಾರ್ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಪರಿಷತ್‌ ಸದಸ್ಯರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಮತ್ತೊಮ್ಮೆ ಅವಕಾಶ ಸಿಗಲಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.